ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದಲ್ಲಿ ವಿಧಾನ ಸಭಾ ಚುನಾವಣೆಯ ಮತದಾನ ಬೆಳಿಗ್ಗೆ 7 ಗಂಟೆಯಿಂದಲೇ ಅತ್ಯಂತ ತುರುಸಿನಿಂದ ಪ್ರಾರಂಭವಾಗಿದೆ. ಗ್ರಾಮದ ಮೂರು ಸಾವಿರ ವಿರಕ್ತ ಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಅವರು ಮತ ಗಟ್ಟೆ 27 ರಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಮತದಾನ ಅತ್ಯಂತ ಪವಿತ್ರವಾಗಿದ್ದು ಎಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿರಿ ಎಂದು ಹೇಳಿದರು.