ಎಂ.ಬಿ. ಪಾಟೀಲ್‌, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ಹಂಚಿಕೆ

0
53

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್‌ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಎಂ.ಬಿ. ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಖಾತೆಯನ್ನು ನೀಡಲಾಗಿದ್ದು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಖಾತೆಯ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆಗೆ ಹೆಚ್ಚುವರಿಯಾಗಿ ಐಟಿ, ಬಿಟಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.
ಈ ಮೊದಲು ಸಿದ್ದರಾಮಯ್ಯ ಅವರ ಅವಧಿಯ ಸರ್ಕಾರ ಇದ್ದಾಗ ಪ್ರಿಯಾಂಕ್‌ ಖರ್ಗೆ ಅವರಿಗೆ ಐಟಿ ಬಿಟಿ ಖಾತೆಯನ್ನೇ ನೀಡಲಾಗಿತ್ತು.

Previous articleಶೆಟ್ಟರ್ ಮನೆ ಮೇಲೆ ಲೋಕಾಯುಕ್ತ ದಾಳಿ
Next articleಭಾರತೀಯ ನೌಕಾದಳಕ್ಕೆ ಹರಿಹರದ ಭೂಮಿಕಾ ಆಯ್ಕೆ