ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಧಾನಸಭೆ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಗಂಟಲು ನೋವು ಕಾಣಿಸಿಕೊಂಡಿದ್ದು, ನೇರವಾಗಿ ಅಲ್ಲಿಂದ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದೊಂದು ವಾರದಿಂದ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇಂದು ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.