ಎಚ್‌ ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಶುಭ ಕೋರಿದ ಗಣ್ಯರು

0
53

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. “ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿ, “ಮಾಜಿ ಪ್ರಧಾನಿಗಳು ಮತ್ತು ಜಾತ್ಯತೀತ ಜನತಾದಳದ ಹಿರಿಯ ನಾಯಕರಾದ ಎಚ್‌ ಡಿ ದೇವೇಗೌಡ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ದೇವೇಗೌಡರಿಗೆ ಪರಮಾತ್ಮ ದೀರ್ಘ ಆಯುಷ್ಯ ಮತ್ತು ಆರೋಗ್ಯವನ್ನು ಕರುಣಿಸಲಿ. ಕರ್ನಾಟಕದ ಜನ, ನೆಲ, ಜಲ ಮತ್ತು ಭಾಷೆಯ ಹಿತಾಸಕ್ತಿ ರಕ್ಷಣೆಯ ಕಾರ್ಯಕ್ಕೆ ಗೌಡರ ಮಾರ್ಗದರ್ಶನ ಸದಾ ನಮಗಿರಲಿ ಎಂದು ಹಾರೈಸುತ್ತೇನೆ” ಎಂದು ಶುಭ ಕೋರಿದ್ದಾರೆ

“ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಎಚ್ ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

“ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ” ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿಗಳು ಹಾಗೂ ಹಿರಿಯ ನಾಯಕರಾದ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆರೋಗ್ಯ ಹಾಗೂ ಆಯುಷ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್‌ ಮಾಡಿದ್ದಾರೆ.

Previous articleಆಗಿರುವುದೆಲ್ಲಾ ಒಳ್ಳೆಯದಕ್ಕೆ
Next articleಆರ್‌ಸಿಬಿಗೆ ಮಾಡು ಇಲ್ಲವೇ ಮಡಿ