ಎಸ್‌ಪಿ ಹೆಸರಲ್ಲಿ ಫೇಸ್‌ಬುಕ್ ಖಾತೆ: ಇಬ್ಬರ ಬಂಧನ

0
12

ಬೆಳಗಾವಿ: ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಜನರಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶದ ವಿಜಯಕುಮಾರ ತಿವಾರಿ, ರಾಜಸ್ಥಾನದ ಅರ್ಬಾಸ್ ಖಾನ್ ಎಂಬುವರೇ ಬಂಧಿತರು. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಜನರನ್ನು ಬೆದರಿಸಿ ಹಣ ಪಡೆದು ವಂಚಿಸುತ್ತಿದ್ದರು ಎಂದು ಗೊತ್ತಾಗಿದೆ.
ಈ ತಂಡ ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆ ತೆರೆದು ವಂಚಿಸಿದ್ದರೆನ್ನಲಾಗಿದೆ. ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಗುಳೇದ ಅವರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ಸದ್ಯ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous articleಸರ್ಕಾರಿ ಕಚೇರಿಗಳ ಸಮಯ ಬದಲಾವಣೆ
Next articleಆಯತಪ್ಪಿ ರೈಲಿಗೆ ಬೀಳುತ್ತಿದವನ ರಕ್ಷಣೆ