ಐಎಸ್ ನಂಟು: ಗಂಗಾವತಿಯ ಹಣ್ಣಿನ ವ್ಯಾಪಾರಿ ಬಂಧನ

0
25
ಇಸ್ಲಾಮಿಕ್ ಸ್ಟೇಟ್

ಕೊಪ್ಪಳ(ಗಂಗಾವತಿ): ನಿಷೇಧಿತ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಗಂಗಾವತಿಯ ಹಣ್ಣಿನ ವ್ಯಾಪಾರಿಯನ್ನು ಶಿವಮೊಗ್ಗ ಪೋಲೀದರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಗಂಗಾವತಿಯ ಮೈಬೂಬ್‌ ನಗರದ ನಿವಾಸಿ, ಬಾಳೆಹಣ್ಣು ವ್ಯಾಪಾರಿ ಶಬ್ಬೀರ್‌ ಎಂದು ಗುರುತಿಸಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಬ್ಬೀರ್‌ ನಿಷೇಧಿತ ಇಸ್ಲಾಮಿಕ್ ಸ್ಟೇಟ್(ಐಎಸ್) ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತ ಆರೋಪಿಗಳ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ.
ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ. ತುಂಗಭದ್ರಾ ದಡದಲ್ಲಿ ಬಾಂಬ್‌ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Previous articleಹಲ್ಲೆಗೊಳಗಾಗಿದ್ದ ಸಿಪಿಐ ಏರ್‌ಲಿಫ್ಟ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ
Next articleಮೈಸೂರಿನಲ್ಲೇ ತಯಾರಾದ ರೇಶ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ ಮುರ್ಮು