ಒಂದು ದೇಶ ಒಂದು ಚುನಾವಣೆ: ಸಣ್ಣ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ಲ್ಯಾನ್‌

0
19

ವಿಜಯಪುರ: ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಪಕ್ಷದ ರಾಷ್ಟ್ರೀಯ ನಾಯಕರು ವಿರೋಧಿಸಿದ್ದಾರೆ, ಇದನ್ನು ಜಾರಿಗೊಳಿಸುವುದು ಅಸಾದ್ಯ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರೋಧವಾಗಿದೆ. ನಮ್ಮ ರಾಷ್ಟ್ರೀಯ ನಾಯಕರು ಇದನ್ನು ವಿರೋಧ ಮಾಡಿದ್ದಾರೆ ಬಿಜೆಪಿ ಈ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸಲು ಪ್ಲ್ಯಾನ್‌ ಹಾಕಿಕೊಂಡಿದೆ. ಇತ್ತೀಚಿಗೆ ಸಣ್ಣ ಪಕ್ಷಗಳಿಗೆ ಹೆಚ್ಚು ನಂಬರ್ಸ್ ಬರುತ್ತಿದೆ. ಹಾಗಾಗಿ ಪ್ರಾದೇಶಿಕ ಪಕ್ಷಗಳ ಮುಗಿಸಲು ಪ್ಲ್ಯಾನ್‌ ಮಾಡಿಕೊಂಡಿದೆ, ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಕೆಲವು ಕಡೆ ಚುನಾವಣೆ ನಡೆದು ಒಂದೂವರೆ ವರ್ಷ-ಎರಡೂವರೆ ವರ್ಷ ಆಗಿದೆ, ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದು ಎಂದು ಶಿವಕುಮಾರ್ ಹೇಳಿದರು.

ಆಲಮಟ್ಟಿ ಜಲಾಶಯ 524.256 ಮೀಟರ್‌ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧ: ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ ಅಭ್ಯಂತರವಿಲ್ಲ ಎಂದರು. ಸೋಮುವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿಯವರು ಯುಕೆಪಿ ಸಂತ್ರಸ್ತರ ಮತ್ತು ಈ ಭಾಗದ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿ, ತೀರ್ಮಾನಿಸುತ್ತೇವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಅಂತಿಮ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸದ ಹೊರತು ಸದ್ಯ ನಾವೇನು ಮಾಡಲು ಸಾಧ್ಯವಿಲ್ಲ ಎಂದರು. ಗೆಜೆಟ್ ನೋಟಿಫಿಕೇಶನ್ ಆಗುವ ಮುನ್ನ ಕಾಮಗಾರಿ ಮಾಡಬೇಕಾ, ಬೇಡವಾ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. ಅದರ ಮಧ್ಯೆಯೂ ನಾವು ಪರ್ಯಾಯ ಏನೇನು ಮಾಡಬೇಕು ಎಂಬ ಚರ್ಚೆ ಮಾಡುತ್ತೇವೆ ಎಂದರು.

Previous articleಆರ್​ಬಿಐ ಕಚೇರಿ ಸೇರಿದಂತೆ ಶಾಲೆಗಳಿಗೆ ಬಾಂಬ್ ಬೆದರಿಕೆ
Next articleಲಡ್ಡು ಪ್ರಸಾದಕ್ಕೆ ೧೦೦ ರೂ: ಮಾಲಾಧಾರಿಗಳ ಆಕ್ರೋಶ