ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯಲ್ಲ

0
18

ಬೆಂಗಳೂರು: ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇರುವ ವಿದ್ಯುತ್‌ನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್‌ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್‌ಗಳು ಫೀಲ್ಡ್‌ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸೂಚಿಸಿದರು.

Previous articleಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ ಇನ್ನಿಲ್ಲ
Next articleಅಕ್ಟೋಬರ್ 16 ರಿಂದ 18 ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ