ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ

0
35
ದಸರಾ ಮಹೋತ್ಸವ

ಮೈಸೂರು: ಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ವರಿಗೂ ಲೇಸನ್ನು ಬಯಸುವ ಕಲ್ಯಾಣದ ಚಿಂತನೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ರಂಗಗಳಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ. ನಮ್ಮಲ್ಲಿರುವ ಬಡ ಜನರ ಬದುಕನ್ನು ಎತ್ತರಕ್ಕೆ ಕೊಂಡೊಯ್ಯಬೇಕಿದೆ. ಸರ್ವರಿಗೂ ಲೇಸನ್ನು ಬಯಸುವ ಕಲ್ಯಾಣದ ಚಿಂತನೆಯ ಅವಶ್ಯಕತೆ ಇದೆ. ಅಂಥ ಸದ್ಭುದ್ಧಿ ನೀಡಿ, ಕನ್ನಡ ನಾಡನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿ ಎಂದರು.
ಗತವೈಭವವನ್ನು ನೆನೆಪಿಸುವ ಅದ್ದೂರಿ ದಸರಾ
ಈ ಬಾರಿ ದಸರಾ ಹಲವಾರು ವಿಶೇಷತೆಗಳಿಂದ ಕೂಡಿವೆ. ಕಳೆದ 2 ವರ್ಷಗಳಿಗಿಂತ ಅರ್ಥಪೂರ್ಣವಾಗಿ, ಗತವೈಭವವನ್ನು ನೆನೆಪಿಸುವ ರೀತಿಯಲ್ಲಿ ಅದ್ದೂರಿಯಾಗಿ ನಾವೆಲ್ಲರೂ ಒಟ್ಟಾಗಿ ಆಚರಣೆ ಮಾಡುತ್ತಿದ್ದೇವೆ.
ದುಷ್ಟರ ನಾಶ, ಶಿಷ್ಟರ ರಕ್ಷಣೆ
ದುಷ್ಟರ ಸಂಹಾರ, ಶಿಷ್ಟರ ಪರಿಪಾಲನೆ ಮೊದಲಿನಿಂದಲೂ ಬಂದಿದೆ. ಆದರೆ ನಮ್ಮೊಳಗಿನ ಅವಗುಣಗಳ ನಿಗ್ರಹವನ್ನು ಆತ್ಮಸಾಕ್ಷಿಯಾಗಿ ನಾವೇ ಮಾಡಿಕೊಳ್ಳುವುದು ಹಾಗೂ ನಮ್ಮ ಆತ್ಮಶುದ್ಧೀಕರಣ ಮಾಡುವ, ದುಷ್ಟ ವಿಚಾರಗಳನ್ನು ದೂರವಿಡುವ, ಉತ್ತಮ ವಿಚಾರಗಳಿಗೆ ಪುರಸ್ಕಾರ ನೀಡಿ ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡುವ ಪವಿತ್ರ ದಿನ ಎಂದರು.

Previous articleಪೊಲೀಸರೊಂದಿಗೆ ಸಾರ್ವಜನಿಕರ ವಾಗ್ವಾದ
Next articleಐಐಐಟಿ ನೂತನ ಕಟ್ಟಡ ಉದ್ಘಾಟನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವಿಲ್ಲದೇ ಭಣಗುಡುತ್ತಿರುವ ತಡಸಿನಕೊಪ್ಪ ರಸ್ತೆ.