ಕನ್ನಡಕ್ಕಾಗಿ ಓಡು ಕಾರ್ಯಕ್ರಮಕ್ಕೆ ಚಾಲನೆ

0
25

ಮೂರು ದಶಕಗಳ ನಂತರ ಹೆಮ್ಮೆಯ ಸಕ್ಕರೆ ನಾಡು ಮಂಡ್ಯದಲ್ಲಿ ಇದೇ ಡಿಸೆಂಬರ್ 20, 21 ಹಾಗೂ 22 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ‘ಕನ್ನಡಕ್ಕಾಗಿ ಓಡು’ ಘೋಷಣೆಯೊಂದಿಗೆ ಸುಮಾರು 10,000ಕ್ಕೂ ಅಧಿಕ ಜನರು ಮ್ಯಾರಥಾನ್‌ನಲ್ಲಿ ಪಾಲ್ಗೊಂಡರು.
ಜಲ್ಲೆಯಲ್ಲಿ ಡಿಸೆಂಬರ್ 20ರಿಂದ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಸ‌ರ್ ಎಂ.ವಿ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮ್ಯಾರಥಾನ್​ನಲ್ಲಿ ಸ್ಯಾಂಡಲ್​ವುಡ್​ನ ಖ್ಯಾತ ನಟ, ನಟಿಯರು ಭಾಗಿಯಾಗಿದ್ದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ, ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ವಿನಯ್ ಗುರೂಜಿ, ಶಾಸಕ ಗಣಿಗ ರವಿಕುಮಾರ್, ಸ್ಯಾಂಡಲ್​ವುಡ್​ ನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್ ಹಾಗೂ ನಟಿ ಸಪ್ತಮಿಗೌಡ ಭಾಗಿಯಾಗಿದ್ದರು. ಇದರ ಜೊತೆಗೆ ಹಲವು ಗಣ್ಯರು ಕೂಡ ಇದ್ದರು.

Previous articleಫಿಟ್ ಇಂಡಿಯಾ ಸೈಕ್ಲಿಂಗ್ ಆಂದೋಲನ: ತೇಜಸ್ವಿ ಸೂರ್ಯ ಭಾಗಿ
Next articleಚಾರ್ಮಾಡಿ ನದಿಯಲ್ಲಿ ಗೋವುಗಳ ಅವಶೇಷ ಪತ್ತೆ