ಹಾವೇರಿ: ಜಮೀನಿಗೆ ತೆರಳಿದ್ದ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಶನಿವಾರ ಶಿಗ್ಗಾವಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.
ಕರಡಿ ದಾಳಿಯಿಂದಾಗಿ ರೈತ ಬಸೀರ್ ಸಾಬ್ ಸವದತ್ತಿ (45), ರಜಾಕ್ (30) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮೀನಿನ ಕೃಷಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿಗ್ಗಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.