ಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು

0
18

ನವದೆಹಲಿ: ಕುಸ್ತಿಪಟು ವಿನೇಶ್‌ ಫೋಗಟ್‌ ನವದೆಹಲಿಯ ಕರ್ತವ್ಯ ಪಥದ ಮಾರ್ಗದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿಯನ್ನು ಬಿಟ್ಟು ಹೋಗಿದ್ದಾರೆ.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್‌ ಫೋಗಟ್‌ ಮಂಗಳವಾರ ಪ್ರಧಾನಿಗೆ ಬಹಿರಂಗ ಪತ್ರದಲ್ಲಿ ಪ್ರಶಸ್ತಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಆದರೆ, ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದಿದ್ದರಿಂದ ಕರ್ತವ್ಯ ಪಥದ ಮಾರ್ಗದಲ್ಲೇ ಪ್ರಶಸ್ತಿಯನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

Previous articleಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಬಂಧನ
Next articleಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್?