ಕರ್ನಾಟಕ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

0
19

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್‌ ಅವರು ರಜನೀಶ್‌ ಗೋಯಲ್‌ ಅವರ ಪತ್ನಿಯಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು. “ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ” ಎಂಬುದಾಗಿ ಅವರು ತಿಳಿಸಿದರು, ಶಾಲಿನಿ ರಜನೀಶ್‌ ಅವರು ಸದ್ಯ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮುಂಬಡ್ತಿ ನೀಡಲಾಗಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

Previous articleನನ್ನ ರಾಜಕೀಯ ಜೀವನ ತೆರೆದ ಪುಸ್ತಕ…
Next articleರಸ್ತೆ ಅಪಘಾತದ ಸಾವುಗಳು, ಕ್ಯಾನ್ಸರ್ ಸಾವುಗಳಿಗಿಂತ ಅಧಿಕ