Home Advertisement
Home ನಮ್ಮ ಜಿಲ್ಲೆ ಕಲಬುರಗಿ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಖರ್ಗೆ ಪತ್ರ

0
120

ಕಲಬುರಗಿ: ರಷ್ಯಾ ಯುದ್ಧಭೂಮಿಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ನಮ್ಮ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಮಾಹಿತಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಮ್ಮ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ನಮ್ಮ ಯುವಕರ ಸುರಕ್ಷಿತ ವಾಪಸಾತಿಗೆ ಆಗ್ರಹಿಸಿದ್ದಾರೆ.
ಉದ್ಯೋಗದ ಆಮಿಷಗಳಿಗೆ ಒಳಗಾಗಿ ರಷ್ಯಾಗೆ ತೆರಳಿದ್ದ ನಮ್ಮ ದೇಶದ ಯುವಕರು ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವುದು ದುರದೃಷ್ಟಕರ. ಕಳೆದ ಒಂದು ವರ್ಷದಿಂದಲೂ ಈ ರೀತಿ ನಮ್ಮ ಯುವಕರಿಗೆ ಆಮಿಷ ಒಡ್ಡಿ ಯುದ್ಧಕ್ಕೆ ಬಳಸಿಕೊಳ್ಳುತ್ತಿರುವ ಆಘಾತಕಾರಿ ಮಾಹಿತಿಗಳು ಬರುತ್ತಿವೆ.
ಮಲ್ಲಿಕಾರ್ಜುನ ಖರ್ಗೆಯವರ ಮನವಿ ಪತ್ರಕ್ಕೆ ಸ್ಪಂದಿಸಿ ಕೇಂದ್ರ ಸರ್ಕಾರವು ಆದಷ್ಟು ಶೀಘ್ರವಾಗಿ ನಮ್ಮ ಯುವಕರನ್ನು ವಾಪಾಸ್ ನಮ್ಮ ದೇಶಕ್ಕೆ ಕರೆತರಲಿ ಎಂಬುದು ನನ್ನ ಆಶಯವಾಗಿದೆ ಎಂದಿದ್ದಾರೆ.