ಕಲಾ ನಿರ್ದೇಶಕ ನಿತಿನ್ ದೇಸಾಯಿ ನೇಣಿಗೆ ಶರಣು

0
13

ಬಾಲಿವುಡ್‌ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ನೇಣಿಗೆ ಶರಣಾಗಿದ್ದಾರೆ. ಕರ್ಜತ್‌ನಲ್ಲಿರುವ ಎನ್‌ಡಿ ಸ್ಟುಡಿಯೋದಲ್ಲಿ ನಿತಿನ್ ಪಾರ್ಥಿವ ಶರೀರ ಕಂಡುಬಂದಿದೆ. ನಿರ್ದೇಶಕ ನಿತಿನ್ ದೇಸಾಯಿ ಅವರು ಹಿಂದಿ, ಮರಾಠಿ ಕಿರುತೆರೆಯಲ್ಲೂ ಕೆಲಸ ಮಾಡಿದ ಇವರು ಒಂದೆರಡು ಸಿನಿಮಾಗಳನ್ನು ನಿರ್ದೇಶಿಸಿ ಕೆಲ ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರಗಳನ್ನು ನಿಭಾಯಿಸಿದ್ದರು.
ಸಂಜಯ್‌ ಲೀಲಾ ಬನ್ಸಾಲಿ, ವಿದ್ಯು ವಿನೋದ್ ಚೋಪ್ರಾ, ಹೀಗೆ ಹಲವಾರು ದೊಡ್ಡ ದೊಡ್ಡ ನಿರ್ದೇಶಕರ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಇವರು ತಮ್ಮ ಉತ್ತಮ ಕಲಾ ನಿರ್ದೇಶನಕ್ಕಾಗಿ 4 ಬಾರಿ ರಾಷ್ಟ್ರಪ್ರಶಸ್ತಿ ಪಡೆದು ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆಗಸ್ಟ್ 9ರಂದು ಅವರು ಬರ್ತ್​ಡೇ ಆಚರಿಸಿಕೊಳ್ಳಬೇಕಿತ್ತು. ‘ಹಮ್​ ದಿಲ್​ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು. ಸಂಜಯ್ ಲೀಲಾ ಬನ್ಸಾಲಿ, ವಿಧು ವಿನೋದ್ ಚೋಪ್ರಾ, ರಾಜ್​ಕುಮಾರ್ ಹಿರಾನಿ ಮೊದಲಾದ ಖ್ಯಾತ ನಾಮರ ಜೊತೆ ನಿತಿನ್ ಕೆಲಸ ಮಾಡಿದ್ದರು. ‘ಇದು ನಿಜಕ್ಕೂ ಶಾಕಿಂಗ್​. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ನಿತಿನ್ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ.

Previous articleಪ್ರಕೃತಿ ದೋಷ ರಹಿತ ಶ್ರೀರಾಮಚಂದ್ರ
Next articleಅರಗ ಜ್ಞಾನೇಂದ್ರ ಕ್ಷಮೆಗೆ ಕಾಂಗ್ರೆಸ್ ಆಗ್ರಹ