ಕಾಂಗ್ರೆಸ್ 50 ಸ್ಥಾನ ಗೆದ್ದು ತೋರಿಸಲಿ

0
28
ಬೊಮ್ಮಾಯಿ

ಹಾವೇರಿ: ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ಧೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೇಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ಹಾನಗಲ್ಲನಲ್ಲಿ ಕುಮಾರಸ್ವಾಮಿ ಮಠದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗಾಗಿ ಇಟ್ಟ ಹಣವನ್ನ ಗ್ಯಾರಂಟಿಗೆ ಹಾಕಿದ್ದಾರೆ. ಮತ್ತೆ ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಭಾಷಣ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಜಾತಿ ಗಣತಿ ಬಹಿರಂಗಪಡಿಸ್ತೇನೆ ಅಂತ ಹೇಳಿದರು. ಹೊರಗಡೆ ಬಂತಾ? ಕಾಂತರಾಜ್ ವರದಿ ತೆಗೆದುಕೊಂಡಿದ್ದಾರೆ. ಬಹಿರಂಗ ಪಡಿಸಿ. ಚುನಾವಣೆ ಲಾಭಕ್ಕಾಗಿ ವರದಿ ತೆಗೆದುಕೊಂಡಿದ್ದು ಜನರಿಗೆ ಗೊತ್ತಿದೆ. ಮೇಲವರ್ಗದ ಜನರು ಕಾಂತರಾಜ್ ವರದಿ ವಿರೋಧ ಮಾಡಿದರು. ಈಗ ಆ ವರದಿ ರಾಜ್ಯ ಸರ್ಕಾರ ಬಹಿರಂಗ ಪಡಿಸ್ತಿಲ್ಲ. ಜಾತಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Previous article20ರಂದು ಕಾಂಗ್ರೆಸ್​ 2ನೇ ಪಟ್ಟಿ ಬಿಡುಗಡೆ
Next articleಗೋ ಸಂರಕ್ಷಣೆಯಿಂದ ಸಂಪತ್ತು ವೃದ್ಧಿ