ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಜೊತೆಗಿದ್ದರು. ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ