Home Advertisement
Home ತಾಜಾ ಸುದ್ದಿ ಕಾಂಗ್ರೆಸ್ ಕಾಲದ ಭ್ರಷ್ಟಾಚಾರದ ಸಂಪೂರ್ಣ ಮಾಹಿತಿ ರಾಹುಲ್ ಗಾಂಧಿಗೆ ರವಾನೆ: ಸಿಎಂ

ಕಾಂಗ್ರೆಸ್ ಕಾಲದ ಭ್ರಷ್ಟಾಚಾರದ ಸಂಪೂರ್ಣ ಮಾಹಿತಿ ರಾಹುಲ್ ಗಾಂಧಿಗೆ ರವಾನೆ: ಸಿಎಂ

0
274
CM bommai

ಮಂಡ್ಯ (ಕೆ.ಆರ್.ಪೇಟೆ): ಕರ್ನಾಟಕದಲ್ಲಿ ದುಡ್ಡಿದ್ದರೆ ಮಾತ್ರ ನೌಕರಿ ದೊರೆಯುತ್ತದೆ ಎಂದಿರುವ ರಾಹುಲ್ ಗಾಂಧಿಯವರಿಗೆ ಎಲ್ಲಾ ಪ್ರಕರಣಗಳ ಮಾಹಿತಿಯನ್ನು ಅಂಕಿಅಂಶಗಳ ಸಮೇತ ಕಳುಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೆ.ಆರ್.ಪೇಟೆಯ ಅಂಬಿಗ್ರಾಮ ಹೆಲಿಪ್ಯಾಡ್‌ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿಗೆ ಬಹುತೇಕವಾಗಿ ಅವರಿಗೆ ಜಾಣ ಮರೆವಿರಬೇಕು. ಅಥವಾ ಕಾಂಗ್ರೆಸ್‌ನವರು ಅವರಿಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ. ಅವರ ಕಾಲದಲ್ಲಿ ನೇಮಕಾತಿಯಲ್ಲಿ ಆದಷ್ಟು ಭ್ರಷ್ಟಾಚಾರ ಭಾರತ ದೇಶದಲ್ಲಿ ಎಲ್ಲೂ ಆಗಿಲ್ಲ. ಪೊಲೀಸ್ ಪೇದೆ, ಶಿಕ್ಷಕರು, ಪಿಯುಸಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಎಲ್ಲಾ ವಿಚಾರದಲ್ಲಿ ಭ್ರಷ್ಟಾಚಾರವಾಗಿ ತನಿಖೆಯೂ ನಡೆಯುತ್ತಿದೆ. ಅವರಿಗೆ ಕಳುಹಿಸಲಾಗುತ್ತಿದೆ. ಅವರ ಆಡಳಿತದಲ್ಲಿ ಆಗಿರುವ ಭ್ರಷ್ಟಾಚಾರವನ್ನು ಕನ್ನಡಿಯಲ್ಲಿ ನೋಡಿಕೊಂಡು ಆಮೇಲೆ ಮಾತನಾಡಲಿ ಎಂದರು.