ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

0
14

ಕೋಲಾರ: ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬವರನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ನಡೆದಿದೆ. ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಕುಳಿತಿದ್ದ ಶ್ರೀನಿವಾಸ್‌ ಬಳಿ ಬಂದ ಆರು ಮಂದಿ ಅಪರಿಚಿತರು ಮುಖಕ್ಕೆ ಏನನ್ನು ಸ್ಪೇ ಮಾಡಿದ್ದಾರೆ. ಕಣ್ಣುಗಳನ್ನು ಉಜ್ಜಿಕೊಳ್ಳಲು ಮುಂದಾದ ಶ್ರೀನಿವಾಸ್‌ ಮೇಲೆ ಏಕಾಏಕಿ ದಾಳಿ ಮಾಡಿ ಮನಬಂದಂತೆ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಕೂಡಲೇ ಆರ್‌ಜೆ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀವಾಸ್‌ ಮೃತಪಟ್ಟಿದ್ದಾರೆ.

Previous articleಅಂಬಾರಿ ಬಸ್ ನಲ್ಲಿ ಕುಳಿತು ದೀಪಾಲಂಕಾರ ವೀಕ್ಷಿಸಿದ ಸಿಎಂ
Next articleಕಿಲಾಡಿತನವೋ ಅಥವಾ ಕಿಡಿಗೇಡಿತನವೋ?