ಕಾಂಗ್ರೆಸ್ ಮುಖಂಡರೊಂದಿಗೆ ಲಕ್ಷ್ಮಣ ಸವದಿ

0
102
ಸವದಿ

ಬೆಂಗಳೂರು : ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬೇಟಿ ನೀಡಿದರು, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಗೌಪ್ಯ ಸಭೆ ನಡೆಸಲಾಗಿದ್ದು, ಬಹುತೇಕ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆ ಖಚಿತವಾಗಿದೆ. ಸವದಿ, ಸಿದ್ದರಾಮಯ್ಯ ಮಾತುಕತೆ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಸಂಜೆ 4 ಗಂಟೆ ನಂತರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ಧಾರೆ. ಸುದ್ದಿಗೋಷ್ಠಿಯಲ್ಲೇ ಕಾಂಗ್ರೆಸ್ ಸೇರ್ಪಡೆ ಘೋಷಿಸುವ ಸಾಧ್ಯತೆಗಳಿದೆ.

Previous articleಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ
Next articleಡಿಎಂಕೆ ಫೈಲ್ಸ್ ಬಿಡುಗಡೆ