ಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ

0
21

ತುಮಕೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ನಾರಾಯಣ್ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವಿವಾಹಿತರಾಗಿದ್ದ ನಾರಾಯಾನ ಅವರು ಒಬ್ಬಂಟಿಯಾಗಿ ನಗರದ ಸಿಎಸ್‌ಐ ಲೇಔಟ್‌ನಲ್ಲಿರುವ ಮನೆಯಲ್ಲಿ ವಾಸವಿದ್ದರು. ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ (1989, 1994 ಹಾಗೂ 1999) ಶಾಸಕರಾಗಿ ಆಯ್ಕೆ ಆಗಿದ್ದರು. ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Previous articleಹೋರಾಟ ಹತ್ತಿಕ್ಕುವ ಯತ್ನ
Next articleಮಹಿಳೆಯ ಕೊಲೆಗೆ ಯತ್ನ: ನಾಲ್ಕು ಆರೋಪಿಗಳ ಬಂಧನ