ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ

0
35

ವಿಜಯಪುರ: ಇಟ್ಟಿಗೆ ಭಟ್ಟಿ ಮಾಲೀಕ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ನಗರದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಈ ಘಟನೆ ನಡೆದಿದ್ದು,. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ, ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಹಲ್ಲೆಗೊಳಗಾದ ಕಾರ್ಮಿಕರು. ಇನ್ನು ಹಲ್ಲೆಗೊಳಗಾದ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಹಾಗೂ ಇತರರು ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Previous articleಕೋಟ್ಯಂತರ ಜನರ ಭಾವನೆಯ ರಕ್ಷಣೆ ಎಂದು
Next articleಅಮಿತ್‌ ಶಾ ಕುರಿತ ಹೇಳಿಕೆ : ರಾಹುಲ್ ವಿರುದ್ಧದ ವಿಚಾರಣೆಗೆ ತಡೆ