ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

0
22

ಶ್ರೀರಂಗಪಟ್ಟಣ :- ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಕಾವೇರಿ ನದಿಗೆ ಇಳಿದು ಪ್ರತಿಭಟಿಸಿದರು.

ಪಟ್ಟಣದ ಕಾವೇರಿ ನದಿಯ ಸ್ನಾನಘಟ್ಟ ಬಳಿ ರೈತ ಸಂಘ,ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಕಾವೇರಿ ನದಿಗೆ ಇಳಿದು ಪ್ರತಿಪಟಿಸಿದರು. ಮುಖಂಡ ಕೆ.ಎಸ್.ನಂಜುಂಡೇಗೌಡ, ಬಿ.ಸಿ ಕೃಷ್ಣೇಗೌಡ,ಮೇಳಾಪುರ ಜಯರಾಮ, ಹನುಮಂತ ನಗರದ ಸ್ವಾಮಿ, ಹೊಸೂರಿನ ಶಿವರಾಜ್,ಹನಿಯಂಬಾಡಿ ನಾಗರಾಜ್, ಮಹದೇವ,ಹೊಸ ಉಂಡವಾಡಿ ಪುಟ್ಟೇಗೌಡ, ಪಾಲಹಳ್ಳಿ ರಾಮಚಂದ್ರ ಕೂಡ್ಲುಕುಪ್ಪೆ ಸ್ವಾಮಿ ಗೌಡ,ಪುಟ್ಟೇಗೌಡ, ಬಲ್ಲೇನಹಳ್ಳಿ ಕೃಷ್ಣೆಗೌಡ, ಬಲ್ಲೇನಹಳ್ಳಿ ಮಹೇಶ್, ಧರಸಗುಪ್ಪೆ ಮಹೇಶ, ಚಂದಗಾಲು ಶಿವರಾಮ್, ಚಿಂದಗಿರಿ ಕೊಪ್ಪಲು ರಾಮಚಂದ್ರ ಕಾವೇರಿ ನದಿಗೆ ಇಳಿದು ಹರಿಯುತ್ತಿರುವ ನೀರಿನಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
ಕಾವೇರಿ ಕಣಿವೆ ಜಲಾಶಯಗಳಿಂದ ನೀರು ಬಿಡುವ ಮುನ್ನ ಎಚ್ಚೆತ್ತು ಕೊಂಡು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗದೆ, ಏಕಾಏಕಿ ನೀರು ಬಿಟ್ಟು, ಜಲಾಶಯಗಳನ್ನು ಬರಿದು ಮಾಡಿ, ಕುಡಿಯುವ ನೀರಿಗೂ ತತ್ವಾರ ತಂದು ಇದೀಗ ರೈತರ ಕಣ್ಣಿಗೆ ಮಣ್ಣೆರೆಚುವ ಕೆಲಸಕ್ಕೆ ಮುಂದಾಗಿದೆ. ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು ಜಿಲ್ಲೆಯ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದುದೂರಿದರು.
ಜಲಸಂಪನ್ಮೂಲ ಸಚಿವ ಡಿ,ಕೆ ಶಿವಕುಮಾರ್ ನ್ಯಾಯಾಲಯಕ್ಕೆ ಹೋಗಲಿ ಎಂದು ಉಡಾಫೆ ಆಗಿ ಮಾತನಾಡಿದ್ದು. ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ರೈತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ಪೊಲೀಸರು ಮುನ್ನೆಚ್ಚರಿಕೆ ವಹಿಸಿ ಪ್ರತಿಭಟನಾ ನಿರತ ರೈತರು ನದಿಯಲ್ಲಿ ಜಾರದಂತೆ ಹಗ್ಗದ ಸಹಾಯದಿಂದ ಸುತ್ತುವರಿದು ರಕ್ಷಣೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು.

Previous articleರಾಜ್ಯದ ಹಿತರಕ್ಷಣೆ ವಿಷಯದಲ್ಲಿ ರಾಜಿ ಇಲ್ಲ
Next articleಚಂದ್ರ ಸ್ಪರ್ಶಕ್ಕೆ ವಿಕ್ರಮನ ಕಾತರ