ಬೆಂಗಳೂರು: ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದಕ್ಕೆ ಕಾರಣವಾಗಿರುವ ಕಾವೇರಿ ನೀರು ಹಂಚಿಕೆ ವಿಚಾರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಸಮಿತಿ ಅಧಿಕಾರಿಗಳು, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿ ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲೇ ಬೇಕು ಅಂತ ಸಭೆಯಲ್ಲಿ ಆದೇಶಿಸಲಾಗಿದೆ. ಇನ್ನೂ 15 ದಿನಗಳ ಕಾಲ ಪ್ರತಿ ದಿನ ಕರ್ನಾಟಕದಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲೇಬೇಕಾಗಿದೆ.