Home Advertisement
Home ತಾಜಾ ಸುದ್ದಿ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂ. ಮಂಜೂರು: ದೊಡ್ಡಗೌಡ್ರ

ಕಿತ್ತೂರು ಉತ್ಸವಕ್ಕೆ 2 ಕೋಟಿ ರೂ. ಮಂಜೂರು: ದೊಡ್ಡಗೌಡ್ರ

0
211
ಕಿತ್ತೂರ ಉತ್ಸವ

ಬೆಳಗಾವಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿದ್ದು, ಸರಕಾರ ಎರಡು ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಉತ್ಸವದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ. 2ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದರು.