ಬೆಳಗಾವಿ: ಬೂತ್ ಸಮಾವೇಶ ಹಾಗೂ ಪ್ರಬುದ್ಧರ ಸಭೆಯಲ್ಲಿ ಭಾಗವಹಿಸಲು ಕಿತ್ತೂರು ರಾಣಿ ಚೆನ್ನಮ್ಮನ ನಾಡು, ಕುಂದಾ ನಗರಿ ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸದೆ ಮಂಗಳಾ ಸುರೇಶ್ ಅಂಗಡಿ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ, ಶಾಸಕ ಸಂಜಯ್ ಪಾಟೀಲ್, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬೆಳಗಾವಿ ನಗರ ಜಿಲ್ಲಾ ಅಧ್ಯಕ್ಷ ಗೀತಾ ಸುತಾರ್, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸತೀಶ್ ಅಪ್ಪಾಜಿಗೋಳ್ ಉಪಸ್ಥಿತರಿದ್ದರು.