Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ ರಾಜಕೀಯಕ್ಕೆ ಬಳಕೆ: ಸಿದ್ದರಾಮಯ್ಯ

ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ ರಾಜಕೀಯಕ್ಕೆ ಬಳಕೆ: ಸಿದ್ದರಾಮಯ್ಯ

0
88

ಮಂಗಳೂರು: ಕುಕ್ಕರ್‌ ಬ್ಲಾಸ್ಟ್‌ ಪ್ರಕರಣವನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳಲು ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಾರ್ಥ ಕಲ್ಪಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಭಯೋತ್ಪಾದನೆ ಚಟುವಟಿಕೆ ಆರಂಭವಾಗಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈಗ ಡಬಲ್‌ ಇಂಜಿನ್‌ ಸರ್ಕಾರವಿದೆಯಲ್ಲ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲಿ. ಜನ ಅಧಿಕಾರ ಕೊಟ್ಟಿದ್ದು ಭಾವನಾತ್ಮಕ ವಿಚಾರಗಳನ್ನು ಪ್ರಚೋದಿಸಲು ಅಲ್ಲ ಎಂದು ತಿರುಗೇಟು ನೀಡಿದರು.

Previous articleನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
Next articleನಾಲಿಗೆ ಮೇಲೆ ಹಿಡಿತವಿರಲಿ-ಕ್ಷೇತ್ರದ ಜನರೇ ನನ್ನ ದಮ್ಮು, ತಾಕತ್ತು