ಕುಕ್ಕೆ – ಚಂಪಾಷಷ್ಠಿ ಮಹಾರಥೋತ್ಸವ

0
9

ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಸೋಮವಾರ ಧನುರ್ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ, ಚಿಕ್ಕ ರಥೋತ್ಸವ ಜರುಗಿತು.
ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನಡೆಯಿತು. ಸಹಸ್ರಾರು ಭಕ್ತರು ಮಹಾರಥೋತ್ಸವ ಸಂದರ್ಭವನ್ನು ಕಣ್ತುಂಬಿಕೊಂಡರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಮಿತಿ ಸದಸ್ಯತು ಹಾಗೂ ಕ್ಷೇತ್ರದ ಭಕ್ತರು ಭಾಗವಹಿಸಿದ್ದರು.

Previous articleಅಶಿಸ್ತಿನ ವರ್ತನೆ: ಪ್ರತಿಪಕ್ಷದ 47 ಸಂಸದರು ಅಮಾನತು
Next articleಮೀನುಗಾರಿಕಾ ದೋಣಿ ದುರಂತ – ಇಬ್ಬರ ಸಾವು