ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು: ಸ್ಥಳಕ್ಕೆ ಅಧಿಕಾರಿಗಳ ಭೇಟಿ

0
17

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಕುಡಿಯುವ ನೀರಿ‌ನಲ್ಲಿ ವಾಸನೆ ಬಂದ ಹಿನ್ನೆಲೆ ಗ್ರಾಮಸ್ಥರು ಟ್ಯಾಂಕ್‌ನನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ಕೋತಿಗಳು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸತ್ತ ಕೋತಿಗಳನ್ನು ಹೊರಗಡೆ ತೆಗೆದಿದ್ದಾರೆ. ಕೋತಿಗಳು ಸತ್ತು ಬಿದ್ದ ಟ್ಯಾಂಕ್‌ನಿಂದಲೇ ಜನರಿಗೆ ಕುಡಿಯುವ ನೀರು ಪೂರೈಕೆ ಆಗಿದ್ದು, ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದ್ದು ಗ್ರಾಪಂ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡಿದ್ದಾರೆ, ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಚತೆಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

Previous articleಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ
Next articleಮಹಾರಾಷ್ಟ್ರ ಭೀಕರ ಅಪಘಾತ: 12 ಮಂದಿ ಸಾವು