ಕುಮಾರಸ್ವಾಮಿ ಭಗ್ನಪ್ರೇಮಿಯಂತೆ ವ್ಯಘ್ರರಾಗಿದ್ದಾರೆ

0
35

ಬೆಂಗಳೂರು: ಕುಮಾರಸ್ವಾಮಿಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಅವರ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಹೀಗಾಗಿ ಕನಸು ಭಗ್ನಗೊಂಡ ಭಗ್ನಪ್ರೇಮಿಯಂತೆ ವ್ಯಘ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.
ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ. ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?

Previous articleಕಾಂಗ್ರೆಸ್‌ನ ಎಲ್ಲರಿಂದಲೂ ವರ್ಗಾವಣೆ ದಂಧೆ
Next articleಮಹಿಳೆ ಬ್ಯಾಗಿನಲ್ಲಿದ್ದ 10 ಸಾವಿರ ರೂ. ಎಗರಿಸಿದ ಖದೀಮರು