ಕುಳಗೇರಿ ಚೆಕ್‌ಪೋಸ್ಟ್‌ನಲ್ಲಿ ೧೭.೨೮ ಲಕ್ಷ ರೂ. ಜಪ್ತಿ

0
11

ಬಾಗಲಕೋಟೆ(ಕುಳಗೇರಿ ಕ್ರಾಸ್): ಲೋಕಸಭಾ ಚುನಾವಣೆ ಹಿನ್ನೆಲೆ ಗ್ರಾಮದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಎರಡು ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಒಟ್ಟು ೧೭,೨೮,೦೦೦ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಾದಾಮಿ ಪಿಎಸ್‌ಐ ವಿಠಲ್ ನಾಯಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಕುಳಗೇರಿ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸಿದ ವೇಳೆ ಸರಿಯಾದ ದಾಖಲೆ ಇಲ್ಲದ ೧೭,೨೮,೦೦೦ ರೂ. ಹಣ ಪತ್ತೆಯಾಗಿದೆ. ಸರಿಯಾದ ದಾಖಲೆ ನೀಡದ ಕಾರಣ ಹಣವನ್ನು ಜಪ್ತಿ ಮಾಡಿ ಚುನಾವಣಾ ಸೀಜರ್ ಕಮಿಟಿಯವರಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Previous articleನ್ಯೂಯಾರ್ಕ್ ಫ್ಯಾಶನ್ ವೀಕ್‌ನಲ್ಲಿ ಚನ್ನಪಟ್ಟಣ ಗೊಂಬೆಗಳ ಕೌದಿ ವಿನ್ಯಾಸ ಆಯ್ಕೆ
Next articleಅಪಘಾತ: ಮೂವರು ಸೇರಿ 10 ಕುರಿಗಳು ಸಾವು