Home Advertisement
Home ತಾಜಾ ಸುದ್ದಿ ಕೆ.ಆರ್.ಎಸ್‌ನಲ್ಲಿ ಮುಂದುವರೆದ ಪ್ರತಿಭಟನೆ: ಮೈಸೂರು, ಕೊಡಗು‌ ರೈತರು ಸಾಥ್

ಕೆ.ಆರ್.ಎಸ್‌ನಲ್ಲಿ ಮುಂದುವರೆದ ಪ್ರತಿಭಟನೆ: ಮೈಸೂರು, ಕೊಡಗು‌ ರೈತರು ಸಾಥ್

0
109

ಶ್ರೀರಂಗಪಟ್ಟಣ: ತಮಿಳುನಾಡಿಗೆ ಹರಿಸಲಾಗುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ತಾಲ್ಲೂಕಿನ ಕೆ ಆರ್ ಎಸ್ ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಠಾವಧಿ ಧರಣಿಯು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ನಿರತ ಹೋರಾಟಗಾರರಿಗೆ ಮೈಸೂರು ಹಾಗೂ ಕೊಡಗು ರೈತರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ತಮಿಳುನಾಡಿಗೆ ನೀರು ಬಿಡಬೇಕೆಂಬುದು ಅವೈಜ್ಞಾನಿಕ ತೀರ್ಪಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಿ ಸಂಕಷ್ಠದ ಸೂತ್ರ ಅನುಸರಿಸುವಂತೆ ತಮಿಳುನಾಡು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಒತ್ತಡ ಹೇರಬೇಕೆಂದು ಆಗ್ರಹಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ, ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ ರೈತರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

Previous articleಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧು
Next articleಗೋಡೆ ಕುಸಿದು ಓರ್ವ ವ್ಯಕ್ತಿ ಸಾವು