ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನ

0
34

ಬೆಂಗಳೂರು: ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದೆ.
ಬುಧವಾರ ಅಜಿತ್ ರೈ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಇಂದು ಕೂಡ ಅವರ ಮನೆಯಲ್ಲಿ ಶೋಧಕಾರ್ಯ ಮುಂದುವರಿಸಿದ್ದು, ಈ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅಜಿತ್ ರೈರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.
ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸೇರಿದಂತೆ ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

Previous articleಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ
Next articleಬೆಳಗಾವಿ ಗ್ರೇಡ್-2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ನಿಧನ