ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ

ಹೈದರಾಬಾದ್‌: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟದಿಂದಾಗಿ ಭಾರಿ ಸ್ಫೋಟದಿಂದಾಗಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯೊಳಗೆ ಮತ್ತಷ್ಟು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.