ಕೆಲವೇ ಕ್ಷಣಗಳಲ್ಲಿ ಶೆಟ್ಟರ ಕಾಂಗ್ರೆಸ್ ಸೇರ್ಪಡೆ

0
12
ಶೆಟ್ಟರ್‌

ಕೆಪಿಸಿಸಿ ಕಚೇರಿಗೆ ಆಗಮಿಸಿದ ಮಾಜಿ ಸಿಎಂ ಜಗದೀಶ ಶೆಟ್ಟರ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ಆರಂಭಿಸಲಿದ್ದಾರೆ. ಇದರಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಕುರಿತು ಅವರು ತೀರ್ಮಾನ ಪ್ರಕಟಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪತ್ರಿಕಾಗೋಷ್ಠಿ ಹಿನ್ನಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಜೊತೆ ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Previous articleಶೆಟ್ಟರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
Next articleಆತ್ಮಗೌರವಕ್ಕಾಗಿ ಶೆಟ್ಟರ ಕಾಂಗ್ರೆಸ್ ಸೇರ್ಪಡೆ, ಆಫರ್ ಕೊಟ್ಟಿಲ್ಲ