ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿ ಹಲವರ ವಿರುದ್ಧ FIR

0
34

ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್‌ ಕುಮಾರ್‌ ಕಟೀಲ್‌ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.

Previous articleಪಾಲಿಕೆ ಮಟ್ಟದಲ್ಲಿ ಗಾಂಧಿ ನಡಿಗೆ
Next articleಕೇಂದ್ರ ಸಚಿವೆ ಪ್ರಕರಣಕ್ಕೂ ಸಿಎಂ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ