ಕೇಂದ್ರವೇ ಯತ್ನಾಳ್ ಕಾರ್ಖಾನೆಗೆ 1.5 ಕೋಟಿ ರೂ. ದಂಡ ವಿಧಿಸಿತ್ತು

0
22

ಕಲಬುರಗಿ: ಕಾನೂನು ರೀತಿಯಲ್ಲಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ, ಯತ್ನಾಳ್ ಅವರಿಗೆ ಸೇರಿದ ಕಾರ್ಖಾನೆಗೆ ಪ್ರತ್ಯೇಕವಾಗಿ ಕೊಟ್ಟಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆಗೆ ಕೇಂದ್ರ ಪರಿಸರ ಸಚಿವಾಲಯವೇ ಒಂದೂವರೆ ವರ್ಷದ ಹಿಂದೆ 1.5 ಕೋಟಿ ರೂ. ದಂಡ ವಿಧಿಸಿತ್ತು. ಅದನ್ನು ಪಾವತಿಸಿದ ಬಳಿಕವೂ ಅಗತ್ಯ ಅನುಮತಿ ಪಡೆದಿರಲಿಲ್ಲ, ಇದರಲ್ಲಿ ಯಾವುದೇ ರಾಜಕೀಯವಿಲ್ಲ. ವಾರದ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲ ಮತ್ತು ವಾಯು ಮಾಲಿನ್ಯ ಮಾಡುವ ಕಾರ್ಖಾನೆಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೆ. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಖಾನೆಗಳು ಕಾಯ್ದೆ ಉಲ್ಲಂಘಿಸಿದ್ದರಿಂದ ಕಾನೂನು ರೀತಿಯಲ್ಲಿ ನೋಟಿಸ್ ನೀಡಲಾಗಿದೆ. ಅದರಲ್ಲಿ ಯತ್ನಾಳ್ ಅವರಿಗೆ ಸೇರಿದ ಕಾರ್ಖಾನೆಗೆ ಪ್ರತ್ಯೇಕವಾಗಿ ಕೊಟ್ಟಿಲ್ಲ. ಪರವಾನಗಿ ಪಡೆಯದೇ ಲಕ್ಷಾಂತರ ಟನ್ ಕಬ್ಬು ನುರಿಸಿದ್ದಾರೆ ಮತ್ತು ಬಾಯ್ಲರ್ ಅಳವಡಿಸಿದ್ದಾರೆ. ಹೀಗಾಗಿ ನಿಯಮಾವಳಿ ಪ್ರಕಾರ ನೋಟಿಸ್ ನೀಡಲಾಗಿದೆ, ನೋಟಿಸ್ ಕೊಟ್ಟ ನಂತರ ಕಾರ್ಖಾನೆ ಬಂದ್ ಮಾಡಲೇಬೇಕು. ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು.

Previous articleರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ನೇಮಿಸಿದ ಬಿಜೆಪಿ
Next articleವಯಸ್ಸು ಬರೀ ಅಂಕಿಗಳಿಗಷ್ಟೇ ಸೀಮಿತ, ಸಾಧನೆಯ ಹಂಬಲ ದೊಡ್ಡದು