ಕೊರೊನಾ: 106 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಮುಂದುವರಿದಿದ್ದು ಮತ್ತೆ ಹೊಸದಾಗಿ ೧೦೬ ಪ್ರಕರಣಗಳು ಪತ್ತೆಯಾಗಿವೆ.
ಕಳೆದ ೨೪ ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ೪೧೨ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು ಆ ಪೈಕಿ ೧೦೬ ಜನರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ ನಡುವೆ ಗುರುವಾರ ರಾಜ್ಯದಲ್ಲಿ ೧೭೪ ಮಂದಿ ಸೋಂಕಿತರು ಗುಣಮುಖರಾಗಿದ್ದು ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ ೩೯೮ಕ್ಕೆ ಕುಸಿದಿದೆ. ಸದ್ಯ ರಾಜ್ಯವ ವಿವಿಧೆಡೆ ಐವರು ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆ ಪೈಕಿ ಓರ್ವ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಪಾಸಿಟಿವಿಟಿ ದರ ಮಾತ್ರ ಶೇ. ೨೫.೭ಕ್ಕೆ ಜಿಗಿದಿದೆ.