ಕೋರ್ಟಿನ ಆವರಣದಲ್ಲೇ ಗುಂಡಿನ ದಾಳಿ: ಮಹಿಳೆಯ ಸ್ಥಿತಿ ಗಂಭೀರ

0
7

ನವದೆಹಲಿ: ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ಶುಕ್ರವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದು, ಸದ್ಯ ಅವರನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮಹಿಳೆಯೊಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡೇಟು ತಾಗಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಗಾಯಾಳು ಮಹಿಳೆಯನ್ನು ಏಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಸಾಕೇತ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿ ನಡೆಸಿದವರ ಗುರುತು ಇನ್ನು ಪತ್ತೆ ಆಗಿಲ್ಲ.

Previous articleಡಿಕೆಶಿಗೆ ಢವ ಢವ..
Next articleಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ: ನಾಮಪತ್ರ ಅಂಗೀಕೃತ