ಕೋಲಾರದಲ್ಲಿ ಸಿದ್ದರಾಮಯ್ಯನವರಿಗೆ ಅದ್ದೂರಿ ಸ್ವಾಗತ

0
14

ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಭಾವಹಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ರಾಮಸಂದ್ರ ಗಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಬಳಿಕ ಕೋಲಾರ ನಗರದ ಮಿನಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕಾರ್ಯಕರ್ತರ ಸಭೆಯ ವೇದಿಕೆಯಲ್ಲಿ ಸಿದ್ದರಾಮಯ್ಯರಿಗೆ ಟಗರು ಗಿಫ್ಟ್ ನೀಡಿ, ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿ ಗಧೆ ನೀಡಿ ಕಾಂಗ್ರೆಸ್ ನಾಯಕರು ಗೌರವಿಸಿದರು.
ಜೊತೆಗೆ ಬಹುದಿನಗಳ ನಂತರ ರಮೇಶ್ ಕುಮಾರ್ ಹಾಗೂ ಕೆ.ಎಚ್.ಮುನಿಯಪ್ಪ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ವೇದಿಕೆಯಲ್ಲಿ ರಮೇಶ್ ಕುಮಾರ್, ಕೃಷ್ಣ ಭೈರೇಗೌಡ, ಶಾಸಕರಾದ ನಂಜೇಗೌಡ, ಶ್ರೀನಿವಾಸಗೌಡ, ನಾರಾಯಣಸ್ವಾಮಿ, ನಸೀರ್ ಅಹಮದ್ ಅನಿಲ್ ಕುಮಾರ್, ಕೊತ್ತೂರು ಮಂಜುನಾಥ್, ಡಾ. ಸುಧಾಕರ್, ಹಲವು ನಾಯಕರು ಇದ್ದರು. ಸಭೆಯಲ್ಲಿ 7 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದ್ದರು.

Previous articleಕಲಬುರಗಿ ಜಿಲ್ಲೆಗೆ ಪಂಚರತ್ನ ರಥಯಾತ್ರೆ
Next articleಕೋಲಾರದಿಂದ ಸ್ಪರ್ಧೆ: ಸಿದ್ದರಾಮಯ್ಯ ಘೋಷಣೆ