ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ: ಐಸಿಎಂಆರ್ ಸ್ಪಷ್ಟನೆ

0
123

ಬೆಂಗಳೂರು: ಕೋವಿಡ್ -19 ಲಸಿಕೆ ಮತ್ತು ಆಕಸ್ಮಿಕವಾಗಿ ಸಾವುಗಳು ಸಂಭವಿಸುತ್ತಿರುವ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- ICMR ಹಾಗೂ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಸ್ಪಷ್ಟಪಡಿಸಿದೆ. ಇತ್ತಿಚೆಗೆ ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು. ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಲಸಿಕೆಯ ಬಗ್ಗೆ ಆಧಾರ ರಹಿತ ಆರೋಪಗಳು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡಿ, ಲಸಿಕೆಯ ವಿರುದ್ಧ ಗೊಂದಲ ಸೃಷ್ಟಿಸಬಹುದು, ಇದು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ತಿಳಿಸಿದೆ

Previous articleರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ನೀಡಲು ಸಜ್ಜು
Next articleಕುಶ್ ಮೈನಿ ಫಾರ್ಮುಲಾ ಇ ರೂಕಿ ಪರೀಕ್ಷೆಗೆ ಭಾರತೀಯ ತಾರೆ