ಹುಬ್ಬಳ್ಳಿ: ಹುಬ್ಬಳ್ಳಿಯ ಗಬ್ಬೂರಿನಲ್ಲಿ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಹೊನ್ನಪ್ಪ ಮತ್ತು ಸೋಮು ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಗೆ ಏನು ಕಾರಣ ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಂಡಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.