ಗಡಿ ಭಾಗದಲ್ಲಿ ಸೂಕ್ತ ಭದ್ರತೆಗೆ ಸೂಚನೆ

0
38

ಮಂಗಳೂರು: ಅ. ೨೯ರಂದು ಕೇರಳದಲ್ಲಿ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಸೂಕ್ತ ಭದ್ರತಾ ಕ್ರಮ ಕೈಗೊಳ್ಳಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಅವರು ಮಾಧ್ಯಮದ ಜೊತೆ ಮಾತನಾಡಿ, ಅವರು ದಸರಾ ಸಂದರ್ಭ ಬೆದರಿಕೆ ಹಿನ್ನೆಲೆಯಲ್ಲಿ ಮೈಸೂರು, ಕೊಡಗು ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಅದಕ್ಕೆ ಬೇಕಾದ ಕ್ರಮಗಳನ್ನು ಆಂತರಿಕವಾಗಿ ಸಿದ್ಧಮಾಡಿಕೊಳ್ಳಲಾಗಿತ್ತು ಎಂದರು.
ರಾಜ್ಯದಲ್ಲಿ ಸೈಬರ್ ಕ್ರೈಂ ಹೆಚ್ಚಳ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಸಾಫ್ಟ್‌ವೇರ್ ಒಂದನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ರಾಷ್ಟ್ರ ಮತ್ತು ಅಂತರ್‌ರಾಷ್ಟ್ರದ ಮಟ್ಟಕ್ಕೆ ಕೊಂಡೊಯ್ಯಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

Previous articleಊಟಕ್ಕೆ ಹೋದರೆ ವಿಶೇಷ ಅರ್ಥ ಕಲ್ಪಿಸದಿರಿ
Next articleಮೋಡದ ಮರೆಯಲ್ಲಿ ಗ್ರಹಣ ವೀಕ್ಷಣೆ