ವಿಜಯಪುರ: ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ.
ಗುಂಡು ಹಾರಿಸಿದ ವ್ಯಕ್ತಿಯನ್ನು ಅದೇ ಗ್ರಾಮದ ಮಲ್ಲು ಗಿನ್ನಿ ಎನ್ನಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಮಲ್ಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ ಅದು ಮಿಸ್ ಫೈರ್ ನಿಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ್ದು. ಆತ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.