ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರವಿಂದನಗರದ ಪಿ.ಟಿ.ಕ್ವಾಟರ್ಸ್ ನ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ೧೨ ಜನರನ್ನು ಬಂಧಿಸಿ, ೧ ಕೆಜಿ ೩೬೫ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಲಕ್ಷ ಮೌಲ್ಯದ ಗಾಂಜಾ, ೯ ಮೊಬೈಲ್, ಮೂರು ಬೈಕ್, ಎರಡು ಸಾವಿರ ಹಣ ಸೇರಿ ಒಟ್ಟು ೪.೫೨ ಸಾವಿರ ಮೌಲ್ಯದ ಸಾಮಾಗ್ರಿ ಜಪ್ತ ಮಾಡಿಕೊಂಡಿದ್ದಾರೆ.
ಪ್ರಕರಣದಲ್ಲಿ ನಗರದ ವಿವಿಧ ಬಡವಾಣೆಯ ಅಭಿಷೇಕ ಹನಮಂತ, ಮಹ್ಮದಆಯಾಜ್ ಜೈನುಲಾಬುದ್ದೀನ, ಇಸ್ಮಾಯಿಲ್ ಮೆಹಬೂಬಾಲಿ, ಜಾಪರ @ ಬಾಂಬೆಜಾಫರ ಮಕ್ಕುಲ್, ಜುಬೇರಹ್ಮದ ದಾದಾಪೀರ, ಪುರಕಾನ್ ನಿಸಾರಹ್ಮದ, ಶಾನವಾಜ ಗೌಸಮೋದಿನ, ಸೋಹಿಲ್ ನಜೀರಹ್ಮದ, ಮಹ್ಮದಸಾಧೀಕ ರೀಯಾಜ, ರೋಶನ್ ಸೋಯಬ@ಬಬ್ಲೂ ಜಮೀಲಾಅಹ್ಮದ್, ಸಲೀಂ ಹಜರತಸಾಬ, ಕರೀಂ ಜಾಂಗೀರಖಾನ ಎಂಬುವರನ್ನು ಬಂಧಿಸಿದ್ದಾರೆ.
ಬುಧವಾರ ರಾತ್ರಿ ೧೦.೩೦ ಕ್ಕರ ಬಂದ ಮಾಹಿತಿ ಆಧರಿಸಿ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ಹಳೇಹುಬ್ಬಳ್ಳಿ ಠಾಣೆ ಸಿಪಿಐ ಸುರೇಶ ಯಳ್ಳೂರ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್. ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.