ಗುಡ್​ನ್ಯೂಸ್: ಬೆಂಬಲ ಬೆಲೆ ಯೋಜನೆ ಅಡಿ ಕಡಲೆ ಖರೀದಿಗೆ ಕೇಂದ್ರ ಅನುಮತಿ

0
26

ಜಿಲ್ಲಾವಾರು 90 ದಿನದೊಳಗಾಗಿ‌ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ಖರೀದಿ ಮಾಡಿ, ರೈತರಿಗೆ ಹಣತಲುಪವಂತೆ ಮಾಡುವದು ರಾಜ್ಯ ಸರ್ಕಾರದ ಜವಾಬ್ದಾರಿ

ಬೆಂಗಳೂರು: MSP ಅಡಿಯಲ್ಲಿ ಕಡಲೆ ಖರೀದಿಗೆ ಕೇಂದ್ರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಕರ್ನಾಟಕ ಸರ್ಕಾರದ ಪ್ರಸ್ತಾವನೆಯಂತೆ ಕರ್ನಾಟಕದಲ್ಲಿ 2024-25 ರ ರಾಬಿ ಋತುವಿನಲ್ಲಿ ( ಹಿಂಗಾರು ಬೆಳೆ) ಬೆಳೆದ ಕಡಲೆಯನ್ನು ಬೆಂಬಲ ಬೆಲೆ ಯೋಜನೆಯಡಿ Price Support Scheme (PSS) ಖರೀದಿಗೆ ಭಾರತ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ. ರಾಜ್ಯದಲ್ಲಿ ಕಡಲೆ ಬೆಳೆದ ರೈತರ ಪರಿಸ್ಥಿತಿ ಅರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ರೈತರ ಹಿತ ದೃಷ್ಟಿಯಿಂದ ರೈತಪರ ನಿರ್ಣಯ ತೆಗೆದುಕೊಂಡಿದೆ.
ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಂಡಿದ್ದು ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಯಲ್ಲಿ ನಮೂದಿಸಿದಂತೆ 96,498 ಮೆಟ್ರಿಕ್ ಟನ್ ಗುಣಮಟ್ಟದ ಕಡಲೆ ಕಾಳನ್ನು ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈಗ ಜಿಲ್ಲಾವಾರು 90 ದಿನದೊಳಗಾಗಿ‌ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ಖರೀದಿ ಮಾಡಿ, ರೈತರಿಗೆ ಹಣತಲುಪವಂತೆ ಮಾಡುವದು ರಾಜ್ಯ ಸರ್ಕಾರದ ಜವಾಬ್ದಾರಿ ಆಗಿದ್ದು, ಈ ಕೂಡಲೆ ಈ ನಿಟ್ಟಿನಲ್ಲಿ ಅವರು ಕಾರ್ಯತತ್ಪರಾಗಬೇಕಾಗಿದೆ.
ರಾಜ್ಯ ಸರ್ಕಾರವು ತಕ್ಷಣವೇ ರಾಜ್ಯದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೇಗೆ ಚಾಲನೆ ನೀಡಬೇಕೆಂದು ವಿನಂತಿಸುತ್ತೇನೆ. ರಾಜ್ಯದ ರೈತರ ಸಮಸ್ಯೆಗೆ ಸತತವಾಗಿ ಸ್ಪಂದಿಸಿ ಬೆಳೆಗಳ ಖರೀದಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Previous articleಸಾಹಿತಿ, ಚಿಂತಕ ನಾಡೋಜ ಡಾ. ಜಿ. ಕೃಷ್ಣಪ್ಪ ನಿಧನ
Next articleಮತ್ತೋರ್ವ ನಕ್ಸಲ್ ಶರಣಾಗುವ ಸಾಧ್ಯತೆ