ಗೂಡ್ಸ್ ಪಲ್ಟಿ: ಮಹಿಳೆ ಸಾವು

0
17

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ತ್ರಿಚಕ್ರ ವಾಹನ ಪಲ್ಟಿಯಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬರಟಗಿ ಕ್ರಾಸ್ ಬಳಿ ನಡೆದಿದೆ.
ತಾಲ್ಲೂಕಿನ ಬರಟಗಿ ಕ್ರಾಸ್ ಬಳಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ, ಹಾಸೀಮಬಿ ಹಕೀಮ(32) ಮೃತಪಟ್ಟಿದ್ದಾಳೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ರೋಹಿತ ಹಾಗೂ ಆಸ್ಮಾಬಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleರೈಲು ದುರಂತ: ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು
Next articleಸಸಿಗಳ ದರ ಎಂಟು ಪಟ್ಟು ಹೆಚ್ಚಳ