ಗ್ಯಾರಂಟಿಗಳು ಅರ್ಧಕ್ಕರ್ಧ ಜನರಿಗೆ ತಲುಪಿಲ್ಲ

0
26

ಬೆಂಗಳೂರು: ಬಿಜೆಪಿ ವಿರುದ್ಧ ಮಾನನಷ್ಟ ಹಾಕುವ ಯಾವುದೇ ನೈತಿಕತೆ ಕಾಂಗ್ರೆಸ್‌ ಸರ್ಕಾರಕ್ಕೆ ಇಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ಸಿನ 5 ಗ್ಯಾರಂಟಿಗಳು ಅರ್ಧಕ್ಕರ್ಧ ಜನರಿಗೆ ತಲುಪಿಲ್ಲ, ಆದರೂ 5 ಗ್ಯಾರಂಟಿಗಳ ಹೆಸರಿನಲ್ಲಿ ದಿನದೂಡುತ್ತಿದೆ. ಯಾವುದೇ ಸಾಧನೆ ಇಲ್ಲದೆ ವೇದನಾ ಸಮಾವೇಶ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್‌ಶೀಟ್‌ನಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ ಕುರಿತು ಪ್ರಸ್ತಾಪಿಸಿದ್ದೇವೆ. ಇದರಲ್ಲಿ ಯಾವುದೇ ತಪ್ಪು ಮಾಹಿತಿ ಇಲ್ಲ, ನೈಜ ವಿಚಾರವನ್ನು ರಾಜ್ಯದ ಜನತೆಯ ಮುಂದಿಟ್ಟಿದ್ದೇವೆ. ಕಳೆದ ಎರಡು ವರ್ಷಗಳ ಕಾಂಗ್ರೆಸ್ ಆಡಳಿತ ರಾಜ್ಯವನ್ನು ಹಿಂದೆಂದೂ ಕಾಣದ ದುಸ್ಥಿತಿಗೆ ದೂಡಿದೆ. ಇದು ಆಡಳಿತ ನಡೆಸುವ ಸರ್ಕಾರವಲ್ಲ, ಕೇವಲ ‘ವಸೂಲಿ ಸರ್ಕಾರ’ವಾಗಿದೆ ಎಂದರು.

Previous articleಪ್ರಥಮ ದರ್ಜೆ ಕ್ರಿಕೆಟ್‌ಗೆ ವಿದಾಯ ಹೇಳಿದ ಪ್ರಿಯಾಂಕ್ ಪಾಂಚಾಲ್
Next articleಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಬೆಲ್ಲದ ಬಣ ಪುನರಾಯ್ಕೆ