ಗ್ಯಾರಂಟಿಗೆ ಕಂಡೀಷನ್ ಹಾಕಿದ್ರೆ ಹೋರಾಟ

0
13

ಮೈಸೂರು: ಕಾಂಗ್ರೆಸ್‌ ನೀಡಿದ ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತು ಉಲ್ಲೇಖಿಸಿಲ್ಲ. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನೀಡಿದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಬೇಕು. ಮತದಾರರು ನಿಮ್ಮ‌ ಮುಖ ನೋಡಿ ಮತ ಹಾಕಿಲ್ಲ, ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ. ಚುನಾವಣೆ ಪೂರ್ವದಲ್ಲಿ ಗ್ಯಾರಂಟಿಗೆ ಯಾವುದೇ ಷರತ್ತು ಇರಲಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ರೂ., ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಸೇರಿದಂತೆ ಕೊಟ್ಟ ಎಲ್ಲ ಭರವಸೆ ಈಡೇರಿಸಬೇಕು ಎಂದರು.
ಒಂದು ವೇಳೆ ಕೊಟ್ಟ ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದರು.

Previous articleಜೂನ್ ೪ ರಂದು ಹೈದ್ರಾಬಾದ್ ಚಲೋ
Next articleಜನರ ದಿಕ್ಕು ತಪ್ಪಿಸಬೇಡಿ