ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷರಾದ ಸೋಮನಾಥ್ ಸೇರಿದಂತೆ ಎಲ್ಲ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳು ಈ ವೇಳೆ ಮುಖ್ಯಮಂತ್ರಿಗಳನ್ನು ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.